ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಧರ್ಮಸ್ಥಳದ ವಿರುದ್ಧ ನಡೆದ ಷಡ್ಯಂತ್ರವನ್ನು ಸಿಬಿಐ ಅಥವಾ ಎನ್‍ಐಎ ಸಂಸ್ಥೆಯಿಂದ ತನಿಖೆ ನಡೆಸಿದರೆ ಮಾತ್ರ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ. ಮತ್ತೊಂದೆಡೆ ರಾಜ್ಯ ಸರ್ಕಾರ ಎಸ್ಐಟಿ ತನಿಖೆ ಸಾಕು ಎನ್ನುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ( Enforcement Directorate (ED) ತನಿಖೆಗೆ ಎಂಟ್ರಿಯಾಗಿದೆ.
ಕಾನೂನು ಬಾಹಿರವಾಗಿ ಹಣ ಬಂದಿರುವ ಆರೋಪ ಬಂದಿರುವ ಹಿನ್ನೆಲೆಯಲ್ಲಿ ವಿದೇಶದಿಂದ ಹಣ ಬಂದಿರುವ ಕುರಿತು ಮಾಹಿತಿ ಹಾಗೂ ಅದಕ್ಕೆ ಸಂಬಂಧಿಸಿದ ಪ್ರತಿಗಳು, ವಿದೇಶದಿಂದ ಹಣ ಬಂದರೆ ಅದಕ್ಕೆ ಕಾರಣವೇನು ಎಂಬುದನ್ನು ತಿಳಿಸುವಂತೆ ಬ್ಯಾಂಕ್ ಗಳಿಗೆ ಇಡಿ ಅಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.