ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಅವರು ಸಂವಿಧಾನ ಶಿಲ್ಪಿ ಡಾ! ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ವಕ್ತಾರ ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾಮತ್, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಪ್ರಮುಖರಾದ ಚಂದ್ರಶೇಖರ ಪ್ರಭು, ಗುರುಪ್ರಸಾದ್, ಕಿಶೋರ್ ಕರಂಬಳ್ಳಿ, ದಯಾಶಿನಿ, ಮಾಯಾ ಕಾಮತ್, ಶಾಂತಿ ಮನೋಜ್, ಪ್ರಜ್ಞಾ ಶೆಟ್ಟಿ, ಚಂದ್ರಿಕಾ, ದೀಪಾ ಪೈ, ಸುಮಾ ಶೆಟ್ಟಿ, ವಿದ್ಯಾ ಮತ್ತಿತರರು ಉಪಸ್ಥಿತರಿದ್ದರು.