ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಬಡ ಕುಟುಂಬಕ್ಕೆ ಮನೆ ನಿರ್ಮಾಣ – ಶ್ರಮದಾನದ ಮೂಲಕ ಪೈಂಟಿಂಗ್ ಕೆಲಸ

0
24

ಸುದೀರ್ಘ 27 ವರ್ಷಗಳ ಇತಿಹಾಸವಿರುವ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ನೇತೃತ್ವದಲ್ಲಿ ಸಹೃದಯಿದಾನಿಗಳ ಸಹಕಾರದೊಂದಿಗೆ ನಂದಳಿಕೆ ಗ್ರಾಮದ ಅಬ್ಬನಡ್ಕ ಬಳಿಯ ಕೊರಗ ಸಮುದಾಯದ ಬಡ ಕುಟುಂಬವಾಗಿರುವ ಯಮುನಾ ಮತ್ತು ವಸಂತ ಕೊರಗ ದಂಪತಿಗಳ ಆರ್ಥಿಕ ಸಂಕಷ್ಟದಿಂದ ಅರ್ಧಕ್ಕೆ ನಿಂತಿರುವ ಮನೆ ನಿರ್ಮಾಣದ ಕೆಲಸ ನಡೆಯುತ್ತಿದೆ.

ಕರ್ನಾಟಕ ರಾಜ್ಯೋತ್ಸವದ ಶುಭದಿನದಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಸದಸ್ಯರೆಲ್ಲರೂ ಸೇರಿಕೊಂಡು ಬೆಳಿಗ್ಗೆಯಿಂದ ಸಂಜೆವರೆಗೆ ಶ್ರಮದಾನದ ಮೂಲಕ ಮನೆಯ ಸಂಪೂರ್ಣ ಪೈoಟಿಂಗ್ ಕೆಲಸವನ್ನು ಮಾಡಿಕೊಟ್ಟಿರುತ್ತಾರೆ.

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ಬಿನ ಈ ಸಮಾಜಮುಖಿ ಕಾರ್ಯ ಬಡ ಕುಟುಂಬಕ್ಕೆ ಆಸರೆಯಾಗಿದೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸ್ಥಾಪಕಾಧ್ಯಕ್ಷರಾದ ವಿಠಲ ಮೂಲ್ಯ, ಅಬ್ಬನಡ್ಕ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಪ್ರೇಮ್ ಕುಲಾಲ್, ಕಾರ್ಯದರ್ಶಿ ದಿನೇಶ್ ಪೂಜಾರಿ ಬಿರೋಟ್ಟು, ಸಂಘದ ಕಾರ್ಯದರ್ಶಿ ಸುಭಾಷ್ ಕುಮಾರ್, ಜೊತೆ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಕೋಶಾಧಿಕಾರಿ ಶ್ರೀಕಾಂತ್ ಆಚಾರ್ಯ, ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಆಚಾರ್ಯ, ಪೂರ್ವಾಧ್ಯಕ್ಷರಾದ ಸುರೇಶ್ ಕಾಸರಬೈಲು, ರಾಜೇಶ್ ಕೋಟ್ಯಾನ್, ಸತೀಶ್ ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಕೆಮ್ಮಣ್ಣು, ಸದಸ್ಯರಾದ ಹರೀಶ್ ಪೂಜಾರಿ, ಯೋಗೀಶ್ ಆಚಾರ್ಯ, ವೀಣಾ ಪೂಜಾರಿ, ಅನ್ನಪೂರ್ಣ ಕಾಮತ್, ಸಂಘದ ಹಿತೈಷಿಗಳಾದ ರವಿ ಆಚಾರ್ಯ ಯೋಗೀಶ್ ಆಚಾರ್ಯ ಮೊದಲಾದವರಿದ್ದರು.