ಕಾರ್ಕಳ ತಾಲ್ಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ನೆಟ್ವರ್ಕ್ ಇಲ್ಲದೆ ಬಹಳ ಸಮಸ್ಯೆ ಎದುರಿಸುತ್ತಿದ್ದು ಕಳೆದ ಸುಮಾರು ವರ್ಷಗಳ ಹೋರಾಟದ ಫಲವಾಗಿ ಕಾರ್ಕಳದ ಶಾಸಕರಾದ ಸುನಿಲ್ ಕುಮಾರ್ ಇವರ ವಿಶೇಷ ಮುತುವರ್ಜಿಯಿಂದ ಮತ್ತು ಕಾರ್ಕಳದ ಎಲ್ಲಾ ಬಿಜೆಪಿ ನಾಯಕರ ಹೊರಾಟದ ಸಲುವಾಗಿ ನಮ್ಮೂರಿಗೆ ಬಿಎಸ್ಎನ್ಎಲ್ ಟವರ್ ಮಂಜೂರಾಗಿದೆ. ಈಗಾಗಲೇ ಕಾಮಗಾರಿ ಮುಗಿದಿದ್ದು ಅತೀ ಶೀಘ್ರದಲ್ಲಿ ಕಾರ್ಯ ನಿರ್ವಹಿಸಿ ಸಾರ್ವಜನಿಕರಿಗೆ ಉಪಯೋಗವಾಗಲಿದೆ ಎಂದು ಕಾಂತಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಭಾಕರ್ ಕುಲಾಲ್ ತಿಳಿಸಿದ್ದಾರೆ.