ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಇರಂದಾಡಿ ಬಬ್ಬುಸ್ವಾಮಿ ದೈವಸ್ಥಾನ ರಸ್ತೆ ನಿರ್ಮಾಣಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 6.5 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಈ ರಸ್ತೆಯನ್ನು ಇಂದು ದಿನಾಂಕ 04-03-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಉಪಾಧ್ಯಕ್ಷರಾದ ಭಾರತಿ, ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಶೆಟ್ಟಿ, ಲತಾ ಆಚಾರ್ಯ, ಸಂಪತ್ ಕುಮಾರ್, ಯಾಗ್ನಸ್ ಮಥಾಯಸ್, ಗಣೇಶ್ ಶೆಟ್ಟಿ ಪೈಯಾರು, ಯವಜಿನ್ ಲೋಬೋ, ಶೈಲೇಶ್ ಹಾಗೂ ಜಗದೀಶ್ ಆರಸ್ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.