ಉಡುಪಿ ತಾಲೂಕಿನ ಭಜನಾ ಮಂಡಳಿಗಳ ಪ್ರತಿನಿಧಿಗಳ ಸಮಾಲೋಚನಾ ಸಭೆ

0
29

ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಡುಪಿಯಲ್ಲಿ ನ.28ರಂದು ನಡೆಯುವ ‘ಲಕ್ಷ ಕಂಠ ಗೀತಾ ಪಾರಾಯಣ’ ಮತ್ತು ನ.30ರಂದು ನಡೆಯುವ ‘ಸಂತ ಸಂಗಮ’ ಮತ್ತು ‘ಭಜನೋತ್ಸವ’ದ ಪೂರ್ವಭಾವಿಯಾಗಿ ಉಡುಪಿ ತಾಲೂಕು ವ್ಯಾಪ್ತಿಯ ಸಮಸ್ತ ಭಜನಾ ಮಂಡಳಿಗಳ ಪ್ರತಿನಿಧಿಗಳ ಸಭೆಯು ನ.14 ಶುಕ್ರವಾರ ಸಂಜೆ ಗಂಟೆ 4.00ಕ್ಕೆ ಉಡುಪಿ ಶ್ರೀ ಕೃಷ್ಣ ಮಠದ ‘ಕನಕ ಮಂಟಪ’ದಲ್ಲಿ ನಡೆಯಲಿದೆ

ಈ ಸಭೆಯಲ್ಲಿ ಮಠದ ದಿವಾನ ನಾಗರಾಜ ಆಚಾರ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು, ಭಜನಾ ಪರಿಷತ್ ಕೇಂದ್ರ ಸಮಿತಿಯ ಭಜನಾ ತರಬೇತುದಾರೆ ವಿದುಷಿ ಉಷಾ ಹೆಬ್ಬಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ಉಡುಪಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯ್ಕ್, ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ರವೀಂದ್ರ ಎಸ್., ಮಠದ ಪ್ರಮುಖರಾದ ರಮೇಶ್ ಭಟ್, ವಿಕ್ರಮ್ ಕುಂಟಾರು ಸಹಿತ ಯೋಜನೆಯ ವಲಯಗಳ ಮೇಲ್ವಿಚಾರಕರು, ಭಜನಾ ಪರಿಷತ್ ತಾಲೂಕು ಪದಾಧಿಕಾರಿಗಳು ಮತ್ತು ವಲಯಗಳ ಸಂಯೋಜಕರು ಪಾಲ್ಗೊಳ್ಳಲಿದ್ದಾರೆ.

ಈ ಮಹತ್ವದ ಸಭೆಯಲ್ಲಿ ಉಡುಪಿ ತಾಲೂಕು ವ್ಯಾಪ್ತಿಯ ಸಮಸ್ತ ಭಜನಾ ಮಂಡಳಿಗಳ ಪ್ರತಿನಿಧಿಗಳು ಮತ್ತು ಭಜಕರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here