ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಗ್ರಾಹಕ ಮಾಹಿತಿ ಕಾರ್ಯಕ್ರಮ

0
7

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಜುಲೈ 30 ರಂದು ಗ್ರಾಹಕ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾಲೇಜಿನಲ್ಲಿ ನೂತನವಾಗಿ ಗ್ರಾಹಕ ಸರ್ಟಿಫಿಕೇಟ್ ಕೋರ್ಸ್ ಅನ್ನು ಪ್ರಾರಂಭಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಈ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದ ಕ ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ಸಂಪನ್ಮೂಲ ವ್ಯಕ್ತಿ, ಪತ್ರಕರ್ತ ರಾಯಿ ರಾಜಕುಮಾರ, ಮೂಡುಬಿದಿರೆ ಅವರು ಗ್ರಾಹಕ ಮಾಹಿತಿಯನ್ನು ಪಡೆಯುವುದರಿಂದ ದೊರಕುವ ಸಂಪೂರ್ಣ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಗ್ರಾಹಕ ಸರ್ಟಿಫಿಕೇಟ್ ಕೋರ್ಸ್ ಅನ್ನು ಮಾಡುವುದರಿಂದ ಭವಿಷ್ಯದಲ್ಲಿ ಉದ್ಯೋಗಕ್ಕೆ ಅನುಕೂಲವಾಗುವ ಎಲ್ಲ ವಿಚಾರಗಳ ಬಗ್ಗೆ ತಿಳುವಳಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಅಲ್ಲದೆ ಬದುಕಿನಲ್ಲಿಯೂ ಕೂಡ ಸಾಕಷ್ಟು ಭರವಸೆಯ ಜೀವನವನ್ನು ನಡೆಸಲು ಮಾರ್ಗದರ್ಶನವನ್ನು ನೀಡುತ್ತದೆ ಎನ್ನುವುದನ್ನು ಹಲವಾರು ಉದಾಹರಣೆಗಳ ಮೂಲಕ ತಿಳಿಸಿಕೊಟ್ಟರು.

ಕಾಲೇಜಿನ ಪ್ರತಿ ವಿಭಾಗದ ಆಯ್ದ ವಿದ್ಯಾರ್ಥಿಗಳು ಇತರರಿಗೆ ಮಾಹಿತಿ ಕೊಡುವಂತೆ ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಅಶ್ವಿನಿ ಅವರು ಸಂಘಟಿಸಿದ್ದರು. ಒಕ್ಕೂಟದ ಬಗ್ಗೆ ಕಾರ್ಯದರ್ಶಿ ಸುನಂದ ದಂಬೆಕೋಡಿಯವರು ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿ ಕೋರ್ಸಿನ ಪರೀಕ್ಷೆ ಇತ್ಯಾದಿಗಳ ಮಾಹಿತಿಯನ್ನು ನೀಡಿದರು.