ಮಂಗಳೂರು : ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ.
ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯಲ್ಲಿ ಹರಿಯುತ್ತಿರುವ ವಿವಿಧ ನದಿಗಳು ತುಂಬಿ ಹರಿಯುತ್ತಿವೆ. ಹಳ್ಳ ಕೊಳ್ಳಗಳಲ್ಲಿಯೂ ನೀರಿನ ಹರಿವು ಹೆಚ್ಚಾಗಿದೆ. ಅಲ್ಲದೇ ಭೂ ಕುಸಿತ, ಗುಡ್ಡ ಕುಸಿತದಂತಹ ದುರ್ಘಟನೆಗಳು ಅಲ್ಲಲ್ಲಿ ವರದಿಯಾಗುತ್ತಿದೆ.
ವಿಪರೀತವಾಗಿ ಬೀಸುತ್ತಿರುವ ಗಾಳಿಯಿಂದ ಮರಗಳು ವಿದ್ಯುತ್ ಕಂಬದ ಮೇಲೆ ಬಿದ್ದು ಅವಘಡಗಳು ಸಂಭವಿಸುತ್ತಿದ್ದು ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.