ಉತ್ತರ ಪ್ರದೇಶ :ತಂದೆಯೊಬ್ಬ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ಗರ್ಭವತಿ ಮಾಡಿರುವ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿದೆ. 14 ವರ್ಷದ ಮಗಳ ಮೇಲೆ ತಂದೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ, ಆಕೆ ಫೆಬ್ರವರಿ 5 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆ ವೈದ್ಯರ ಬಳಿ ಘಟನೆಯನ್ನು ಹೇಳಿಕೊಂಡಿದ್ದು, ದಿನಗೂಲಿ ಕಾರ್ಮಿಕನಾಗಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹೆಣ್ಣುಮಗುವಿನ ಮೇಲೆ ಆತ ಪದೇ ಪದೇ ಅತ್ಯಾಚಾರವೆಸಗುತ್ತಿದ್ದ. ಆಕೆ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಂತಿಮವಾಗಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ.
ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರು ಮಕ್ಕಳನ್ನು ಹೊಂದಿರುವ ಆರೋಪಿಯು ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಸಾಗರ್ ಜೈನ್ ಮಾತನಾಡಿ, ಸಂತ್ರಸ್ತೆಯ ತಾಯಿ ಹತ್ತು ವರ್ಷಗಳ ಹಿಂದೆ ನಿಧನರಾಗಿದ್ದರು, ಇದಾದ ಬಳಿಕ ಆತ ತನ್ನ ಮಗಳನ್ನೇ ಬಳಸಿಕೊಂಡಿದ್ದಾನೆಂದು ಹೇಳಿದ್ದಾರೆ.
ಆಕೆಯ ದೂರಿನ ಆಧಾರದ ಮೇಲೆ, ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿ ತಂದೆಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜೈನ್ ದೃಢಪಡಿಸಿದ್ದಾರೆ.