ದಿನಾಂಕ: 31-03-2024ನೇ ರವಿವಾರದಂದು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಸುಬ್ರಮಣ್ಯ ಘಟಕಕ್ಕೆ ಭೇಟಿ ನೀಡಿ ಗ್ರಹ ರಕ್ಷಕರ ಕುಂದುಕೊರತೆ ನಡೆಸಿದರು. ಮುಂಬರುವ 2024ರ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ ಹಾಗೂ ನಿಷ್ಕ್ರಿಯಗೊಂಡ ಗೃಹರಕ್ಷಕರನ್ನು ಮನವೊಲಿಸಿ ಚುನಾವಣೆಗೆ ನಿಯೋಜಿಸುವ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಗೃಹರಕ್ಷಕರು ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರು ಅಂಚೆ ಮೂಲಕ ಮತದಾನ ಮಾಡಲು ಚುನಾವಣಾ ಗುರುತಿನ ಚೀಟಿಯನ್ನು ಮತ್ತು ಭಾಗ ಸಂಖ್ಯೆಯನ್ನು ಘಟಕಾಧಿಕಾರಿಯವರಲ್ಲಿ ನೀಡುವಂತೆ ಆದೇಶಿಸಿದರು. ಸುಬ್ರಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಹರಿಶ್ಟಂದ್ರ ಹಾಗೂ ಸುಬ್ರಮಣ್ಯ ಘಟಕದ 30 ಗೃಹರಕ್ಷಕರು ಉಪಸ್ಥಿತರಿದ್ದರು.