ಚಿಕ್ಕಮಗಳೂರು: ಸದಾ ಒಂದಲ್ಲೊಂದು ವಿವಾದದಿಂದಲೇ ಸುದ್ದಿಯಲ್ಲಿರುವ ವಿವಾದಿತ ಕೇಂದ್ರ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ಗೋರಿಗಳ ನಡುವಿನ ಔದುಂಬರ ವೃಕ್ಷ ಪೂಜೆಗೆ ಅವಕಾಶ ನೀಡುವಂತೆ ಬಜರಂಗದಳ ಪಟ್ಟು ಹಿಡಿದಿದ್ದು, ಸದ್ಯ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಹೊಸ ಟೆನ್ಶನ್ ಶುರುವಾಗಿದೆ.
ಚಿಕ್ಕಮಗಳೂರು ತಾಲೂಕಿನ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ವಿವಾದವು ಮತ್ತೆ ಮುನ್ನೆಲೆಗೆ ಬಂದಿದೆ. ದತ್ತ ಪೀಠದಲ್ಲಿರುವ ಔದುಂಬರ ವೃಕ್ಷಕ್ಕೆ ಪೂಜೆ ಸಲ್ಲಿಸದಂತೆ ಮರದ ಸುತ್ತಲೂ ಜಿಲ್ಲಾಡಳಿತ ಬೇಲಿ ಹಾಕಿದೆ ಅಂತ ಹಿಂದೂ ಪರ ಸಂಘಟನೆಗಳು ಆರೋಪ ಮಾಡುತ್ತಿವೆ. ಇಲ್ಲಿ ಪೂಜೆ ಸಲ್ಲಿಸಲು ನ್ಯಾಯಾಲಯ ಅಥವಾ ಧಾರ್ಮಿಕ ದತ್ತಿ ಇಲಾಖೆ ನಿಷೇಧ ಹೇರಿಲ್ಲ ಆದರೂ ನಮಗೆ ಜಿಲ್ಲಾಡಳಿತ ಪೂಜೆಗೆ ಅವಕಾಶ ನೀಡಿಲ್ಲ ಅಂತ ಹಿಂದೂ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ.