ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆ.ಇ.ಇ, ನೀಟ್, ಕೆ.ಸಿ.ಇ.ಟಿ ತಯಾರಿಗಳ ಕುರಿತಾದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಅನುದೀಪ್ಪಿ, ಕೀರ್ತಿವರ್ಧನ್ಎ ಮ್, ಆಶಿಶ್ ಎಸ್‌ಜಿ, ಚಿನ್ಮಯಕೃಷ್ಣವರ್ಮ ಹಾಗೂ ಶ್ರೀರಕ್ಷಾ ಇವರು ಭಾಗವಹಿಸಿ, ತಮ್ಮ ಅನುಭವಗಳನ್ನು ಹಂಚಿಕೊಂಡರು. ಬಳಿಕ ಸಂವಾದ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ಉಪಸ್ಥಿತರಿದ್ದರು. ಕಾರ್ಯಕ್ರಮದ ಒಟ್ಟು ನಿರ್ವಹಣೆಯನ್ನು ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ ಶಾಸ್ತ್ರಿ ನಿರ್ವಹಿಸಿದರು.