Monday, December 2, 2024
Homeರಾಜ್ಯಆಸ್ಪತ್ರೆಯಲ್ಲಿ ಮತಾಂತರಕ್ಕೆ ಯತ್ನಿಸಿದ ಎಂಬಿಬಿಎಸ್‌ ವಿದ್ಯಾರ್ಥಿ | ಹಿಂದೂ ಸಂಘಟನೆಗಳಿಂದ ದೂರು ದಾಖಲು

ಆಸ್ಪತ್ರೆಯಲ್ಲಿ ಮತಾಂತರಕ್ಕೆ ಯತ್ನಿಸಿದ ಎಂಬಿಬಿಎಸ್‌ ವಿದ್ಯಾರ್ಥಿ | ಹಿಂದೂ ಸಂಘಟನೆಗಳಿಂದ ದೂರು ದಾಖಲು

ಕಲಬುರಗಿ: ಕೇರಳ ಮೂಲದ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬ ಕಲಬುರಗಿ ಇಎಸ್ಐ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಪ್ರೇರೇಪಿಸುತ್ತಿದ್ದ ವಿಡಿಯೋ ವೈರಲ್​ ಆಗಿದೆ. ವಿದ್ಯಾರ್ಥಿ ಹಿನೋ ಡಾಲಿಚಾನ್​​ ರೋಗಿಗಳಿಗೆ ಕ್ರೈಸ್ತ ಧರ್ಮದ ಕರಪತ್ರಗಳನ್ನು ನೀಡಿ, ಔಷಧಿ ಹಾಗೂ ಇಂಜೆಕ್ಷನ್‌ನಿಂದ ನಿಮ್ಮ ರೋಗ ವಾಸಿಯಾಗುವುದಿಲ್ಲ. ಬದಲಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಬನ್ನಿ. ಯೆಸುವಿನ ದಾರಿಯಲ್ಲಿ ನಡೆದು ನಿಮ್ಮ ರೋಗಗಳನ್ನ ದೂರ ಮಾಡಿಕೊಳ್ಳಿ ಎಂದು ಹೇಳುತ್ತಿದ್ದನು.
ಮತಾಂತರಕ್ಕೆ ಪ್ರೆರೇಪಿಸುತ್ತಿದ್ದ ವಿಚಾರ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ಆಗಮಿಸಿ, ವಿದ್ಯಾರ್ಥಿ ಹಿನೋ ಡಾಲಿಚಾನ್​ನನ್ನು ಹಿಡಿದು ಪ್ರಶ್ನಿಸಿದಾಗ, ತಾನು ಎಂಬಿಬಿಎಸ್​ ವಿದ್ಯಾರ್ಥಿ ಎಂದು ಹೇಳಿದ್ದಾನೆ. ತಾನು ಕೇವಲ ಓದಲು ಪೇಪರ್​​ ನೀಡುತ್ತಿದ್ದೇನೆ ಎಂದು ಹೇಳಿದ್ದಾನೆ.
ಆಗ ಹಿಂದೂ ಸಂಘಟನೆ ಕಾರ್ಯಕರ್ತರು ವಿದ್ಯಾರ್ಥಿಯನ್ನು ಹಿಡಿದು ತಪಾಸಣೆ ನಡೆಸಿದಾಗ, ಆತನ ಬ್ಯಾಗ್​ನಲ್ಲಿ ಕ್ರೈಸ್ತ​ ಧರ್ಮದ ಕೆಲ ಅಂಶಗಳು ಮಳಯಾಳಂ ಮತ್ತು ಕನ್ನಡದಲ್ಲಿ ಬರೆದಿರುವ ಪುಸ್ತಕ ಪತ್ತೆಯಾಗಿದೆ. ವಿದ್ಯಾರ್ಥಿ ಹಿನೋ ಡಾಲಿಚಾನ್​ನನ್ನು ಹಿಂದೂ ಸಂಘಟನೆ ಕಾರ್ಯಕರ್ತರು‌ ತೀವ್ರ ತರಾಟೆಗೆ ತೆಗೆದುಕೊಂಡರು. ಮತಾಂತರಕ್ಕೆ ಯತ್ನಿಸಿದ ವಿದ್ಯಾರ್ಥಿ ಹಿನೋ ಡಾಲಿಚಾನ್ ವಿರುದ್ಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಗುಲ್ಬರ್ಗಾ ವಿವಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

RELATED ARTICLES
- Advertisment -
Google search engine

Most Popular