ಬೈಲೂರಿನ ಪರಶುರಾಮ ಥೀಮ್ ಪಾರ್ಕ್ನಲ್ಲಿ ಕಟ್ಟಡದ ಮೇಲ್ಚಾವಣಿಗೆ ಅಳವಡಿಸಿದ, ತಾಮ್ರದ ಹೊದಿಕೆಯನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಶನಿವಾರ ಸಾಯಂಕಾಲ ಥೀಮ್ ಪಾರ್ಕ್ ದ್ವಾರವನ್ನು ಮೀಟಿ ಬಾಗಿಲನ್ನು ಒಡೆದು ಕಳ್ಳತನ ಮಾಡಲಾಗಿದೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ, ಶ್ವಾನದಳ ಹಾಗೂ ಸೋಕೋ ತಂಡದಿಂದ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಪತ್ತೆಕಾರ್ಯ ಕಾರ್ಯವನ್ನು ಮುಂದುವರಿಸಲಾಗಿದೆ.

