ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಇಬ್ಬರು ಮಕ್ಕಳು ಸಹಿತ ಐವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 10 ಮಂದಿಗೆ ಗಾಯಗಳಾಗಿವೆ. ಘಟನೆಯ ತೀವ್ರತೆಗೆ ಕಾರ್ಖಾನೆಯ ಪಕ್ಕದ ಮನೆಗಳು ಕುಸಿದುಬಿದ್ದಿವೆ. ಹತ್ತಕ್ಕೂ ಹೆಚ್ಚು ಮನೆಗಳು ಕುಸಿದುಬಿದ್ದಿರುವುದಾಗಿ ಹೇಳಲಾಗಿದ್ದು, ಮನೆಗಳ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಮೀರಾದೇವಿ (52), ಅಮನ್ (20), ಗೌತಮ್ ಕುಶ್ವಾಹ (18), ಇಚ್ಛಾ ಕುಮಾರಿ (03), ಕಾಲು (1) ಎಂಬವರು ಮೃತಪಟ್ಟಿದ್ದಾರೆ. ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಘಟನಾ ಸ್ಥಳದಲ್ಲಿ ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಘಟನಾ ಸ್ಥಳದಲ್ಲಿ ವೈದ್ಯರ ತಂಡ ಆಂಬುಲೆನ್ಸ್, ಅಗ್ನಿಶಾಮಕ ದಳ, ವಿಪತ್ತು ತಂಡ ನಿಯೋಜನೆಗೊಂಡಿದೆ.