ಡೆಲಿವರಿ ಬಾಯ್ಸ್ ಸ್ನೇಹಿತರ ತಂಡಕ್ಕೆ ಕ್ರೂರ ವಿಧಿಯಾಟ: ಯಲ್ಲಾಪುರ ಘಾಟ್‌ನಲ್ಲಿ 7 ಮಂದಿ ಮೃತ್ಯು

0
31

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ಪ್ರದೇಶದಲ್ಲಿ ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರವಾಸಿಗರಿದ್ದ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 7 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಗೋಕರ್ಣ, ಮುರುಡೇಶ್ವರ ಹಾಗೂ ಧರ್ಮಸ್ಥಳದ ಧಾರ್ಮಿಕ ಕ್ಷೇತ್ರಗಳ ಪ್ರವಾಸಕ್ಕಾಗಿ ಹೊರಟಿದ್ದರು ಎಂದು ತಿಳಿದುಬಂದಿದೆ.

ಮೃತಪಟ್ಟವರೆಲ್ಲರೂ ಧಾರವಾಡದಲ್ಲಿ ಡೆಲಿವರಿ ಬಾಯ್ಸ್ ಕೆಲಸ ಮಾಡುತ್ತಿದ್ದ ಸ್ನೇಹಿತರಾಗಿದ್ದಾರೆ. ಪ್ರತಿನಿತ್ಯದ ಕೆಲಸದ ಒತ್ತಡದಿಂದ ಕೊಂಚ ಬಿಡುವು ಮಾಡಿಕೊಂಡು, ದೇವಸ್ಥಾನಗಳ ದರ್ಶನ ಹಾಗೂ ಪ್ರವಾಸದ ಖುಷಿಯಲ್ಲಿದ್ದ ಯುವಕರಿಗೆ ವಿಧಿಯೇ ಸಂಚು ರೂಪಿಸಿತ್ತು. ಒಟ್ಟು 9 ಜನರಿದ್ದ ಈ ಸ್ನೇಹಿತರ ತಂಡವು ಧಾರವಾಡದಿಂದ ಅಂಕೋಲಾ ಮಾರ್ಗವಾಗಿ ಕರಾವಳಿಯತ್ತ ಪ್ರಯಾಣ ಬೆಳೆಸುತ್ತಿತ್ತು. ಈ ವೇಳೆ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ಬಂದ ಲಾರಿ, ಇವರು ಚಲಿಸುತ್ತಿದ್ದ ಕ್ರೂಸರ್ ವಾಹನಕ್ಕೆ ಬಲವಾಗಿ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

LEAVE A REPLY

Please enter your comment!
Please enter your name here