ಮಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ (ರಿ.) ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಸಾಂಸ್ಕೃತಿಕ ಸಂಭ್ರಮ :2022 ದೈವರಾಜ ಕೋಟೆದ ಬಬ್ಬುಸ್ವಾಮಿ ತುಳು ಜಾನಪದ ಸಂಸ್ಕೃತಿ ಧ್ವನಿ ಮುದ್ರಿತ ಸಿ. ಡಿ ಬಿಡುಗಡೆ ಕಾರ್ಯಕ್ರಮ ತಾರೀಖು 9/11/2022 ನೇ ಬುಧವಾರ ಸಂಜೆ 4 ಗಂಟೆಗೆ ಮಂಗಳೂರು ಉರ್ವಾಸ್ಟೋರ್ ನ ಸಿರಿ ಚಾವಡಿ ತುಳುಭವನ ಇಲ್ಲಿ ನಡೆಯಲಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊಫೆಸರ್ ಪಿ ಸುಬ್ರಮಣ್ಯ ಎಡಪಡಿತಾಯ ದೀಪೋದ್ಘಾಟನೆ ಮಾಡಲಿದ್ದಾರೆ.
ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ರಿಜಿಸ್ಟರ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಮೋಹನಾಂಗಯ್ಯ ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಶ್ರೀ ದಿನಕರ ಬಾಬು ಧ್ವನಿಮುದ್ರಿತ ಸಿಡಿ ಬಿಡುಗಡೆ ಮಾಡಲಿದ್ದಾರೆ . ಕರ್ನಾಟಕ ತುಲಾ ಸಾಹಿತ್ಯ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕರು ಮತ್ತು ಆಡಳಿತಾಧಿಕಾರಿಯಾದ ಶ್ರೀ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಾಯಕ ನಿರ್ದೇಶಕರಾದ ಶ್ರೀ ರಾಜೇಶ್ ಜಿ , ಅಖಿಲ ಭಾರತ ಮುಂಡಾಲ ಯುವ ವೇದಿಕೆ ರಿಜಿಸ್ಟರ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಜಯಚಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.