ಉಡುಪಿ: ಪರ್ಯಾಯ ಪುತ್ತಿಗೆ ಮಠ, ಕೃಷ್ಣ ಮಠ ಸಹಯೋಗದಲ್ಲಿ ಆಳ್ವಾಸ್ ನುಡಿಸಿರಿ- ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಕೃಷ್ಣಮಠ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ಶ್ರೀ ವಿಶ್ವೇಶತೀರ್ಥ ವೇದಿಕೆಯಲ್ಲಿ ಡಿ. 13ರಂದು ಸಾಯಂಕಾಲ 5.45ಕ್ಕೆ ಆಳ್ವಾಸ್ ಸಾಂಸತಿಕ ವೈಭವ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ಮುರಳಿ ಕಡೆಕಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಭಾಕಾರ್ಯಕ್ರಮವನ್ನು ಪುತ್ತಿಗೆ ಮಠದ ಶ್ರೀ ಸುಗಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶ್ರೀಂದ್ರ ತೀರ್ಥಶ್ರೀಪಾದರು ಉದ್ಘಾಟಿಸಲಿದ್ದಾರೆ. ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಂಸತಿಕ ಕಾರ್ಯಕ್ರಮವನ್ನು ಕೀರ್ತಿಶೇಷ ಡಾ. ವಿ.ಎಸ್. ಆಚಾರ್ಯರಿಗೆ ಅರ್ಪಿಸಲಾಗುವುದು ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ-ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಕಂಬ ಹಾಗೂ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ ಹಿರಣ್ಯಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನಡೆಯಲಿದೆ. ಆರಂಭದಲ್ಲಿ ಆಳ್ವಾಸ್ ವಿದ್ಯಾರ್ಥಿಗಳಿಂದ ಸಿಂಗಾರಿ ಮೇಳ ್ಯೂಷನ್ ನಡೆಯಲಿದೆ. ಬೊಂಬೆ ವಿನೋದಾವಳಿಯೊಂದಿಗೆ ಆಕರ್ಷಕ ಸಿಡಿಮದ್ದಿನ ಪ್ರದರ್ಶನವಿರಲಿದೆ. ಎಲ್ಲರಿಗೂ ಉಚಿತ ಪ್ರವೇಶವಿರಲಿದೆ ಎಂದು ಮಾಹಿತಿ ನೀಡಿದರು.
ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಗೌರವಾಧ್ಯಕ್ಷ ವಿ.ಜಿ. ಶೆಟ್ಟಿ, ಉಡುಪಿ ಘಟಕದ ಕಾರ್ಯದರ್ಶಿ ಭುವನ ಪ್ರಸಾದ್, ಕಾರ್ಯಕಾರಿಣಿ ಸದಸ್ಯ ಸುಪ್ರಸಾದ್ ಶೆಟ್ಟಿ, ಕಾರ್ಯಕ್ರಮ ಸಂಘಟಕರಾದ ನಿದೀಶ್ ತೋಳಾರ್, ಅಂಬರೀಷ್, ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ, ಉಪಸ್ಥಿತರಿದ್ದರು

