ಮೆಸ್ಕಾಂ ಕಚೇರಿ ಪ್ರಾಂಗಣದಲ್ಲಿ ಗ್ರಾಹಕ ಕುಸಿತ; ಜಿಲ್ಲಾಸ್ಪತ್ರೆಗೆ ದಾಖಲು

0
4

ಉಡುಪಿ : ವಿದ್ಯುತ್ ಬಿಲ್ ಪಾವತಿಸಲು ಮೆಸ್ಕಾಂ ಕಚೇರಿಗೆ ಬಂದಿದ್ದ ಗ್ರಾಹಕರೊಬ್ಬರು ಕಚೇರಿ ಪ್ರಾಂಗಣದಲ್ಲೇ ಕುಸಿದುಬಿದ್ದ ಘಟನೆ ಬುಧವಾರ ನಡೆದಿದೆ.

ತಕ್ಷಣ ಸ್ಪಂದಿಸಿದ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಣರಾಜ್ ಭಟ್ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಒಳಕಾಡು ಅವರು ಅಸ್ವಸ್ಥ ವ್ಯಕ್ತಿಯನ್ನು ಅಂಬುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿ ದಾಖಲಿಸಿದರು. ಈ ಸಂದರ್ಭದಲ್ಲಿ ಮೆಸ್ಕಾಂ ಕಚೇರಿ ಸಿಬ್ಬಂದಿಯೂ ನೆರವು ನೀಡಿದರು.

ಅಸ್ವಸ್ಥ ವ್ಯಕ್ತಿ ಮಾತನಾಡುವ ಸ್ಥಿತಿಯಲ್ಲಿ ಇಲ್ಲದ ಕಾರಣ ಅವರ ಹೆಸರು ಹಾಗೂ ವಿಳಾಸದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಅವರ ವಾರಸುದಾರರು ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.