ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಕೃಷ್ಣಾಪುರ ಶಾಖೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಸಂಘದ ಗ್ರಾಹಕರುಗಳಾದ ಪಿ ಕೆ ಉಪಧ್ಯಾಯ. ಅನಿಲ್ ಕುಮಾರ್ ಬಾಲಚಂದ್ರ ಪಣಂಬೂರು, ಶೋಭ, ಅಬ್ದುಲ್ ಖಾದರ್ ಮತ್ತು ಎಚ್. ಆರ್ ಯದುನಂದಿನಿ ರವರುಗಳು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಪಿ.ಕೆ ಉಪಾಧ್ಯಾಯ ರವರು “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೃಷ್ಣಾಪುರ ಪರಿಸರದಲ್ಲಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು, ದೈನಂದಿನ ವ್ಯವಹಾರಕ್ಕೆ ಉತ್ತಮ ಸೊಸೈಟಿಯಾಗಿದೆ. ಇನ್ನಷ್ಟೂ ಶಾಖೆಗಳನ್ನು ಗ್ರಾಮಾಂತರ ಪ್ರದೇಶಗಳಲ್ಲಿ ತೆರೆಯಲಿ” ಎಂದು ಶುಭ ಹಾರೈಸಿದರು.
ಸದಸ್ಯರಾದ ಅನಿಲ್ ಕುಮಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಗ್ರಾಹಕ-ಸ್ನೇಹಿ ಸಹಕಾರಿ ಸಂಘವಾಗಿದ್ದು, ಶಾಖೆಗಳಿಗೆ ಭೇಟಿ ನೀಡಿದಾಗ ಸಿಬ್ಬಂದಿಗಳ ಸಹಕಾರ ಅತ್ಯುತ್ತಮವಾಗಿದ್ದು, ನಗುಮುಖದಿಂದ ಸೇವೆಯನ್ನು ನೀಡುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಸಂಘವು ಕೇವಲ ಬ್ಯಾಂಕಿAಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಸಂಘದ ಸದಸ್ಯರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ.
ಗ್ರಾಹಕರಿಗೆ ಅಗತ್ಯ ಸಂದರ್ಭಗಳಲ್ಲಿ ಮನೆ ಬಾಗಿಲಿಗೆ ಸೇವೆಯನ್ನು ನೀಡಲಾಗುತ್ತಿದೆ. ಕೃಷ್ಣಾಪುರ ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10 ಹಾಗೂ 1000 ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯವನ್ನು ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು” ಎಂದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ, ರಮಾನಾಥ ಸನಿಲ್, ಮುಖ್ಯ ಕಾರ್ಯನಿರ್ವಹಣಾದಿಕಾರಿ ಸೌಮ್ಯ ವಿಜಯ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಕೃಷ್ಣಾಪುರ ಶಾಖೆಯ ಸಿಬ್ಬಂದಿಯಾದ ಅಶ್ವಿನಿ ರವರು ಸ್ವಾಗತಿಸಿ , ಶಾಖಾಧಿಕಾರಿ ಸುಜಾತ ರವರು ಕಾರ್ಯಕ್ರಮ ನಿರೂಪಿಸಿದರು.

