ಬೆಂಗಳೂರು: ಫೆಂಗಲ್ ಸೈಕ್ಲೋನ್ ಪ್ರಭಾವ ಕರ್ನಾಟಕದ ಮೇಲೂ ಬಿದ್ದಿದೆ.
ಹೀಗಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆ ಆಗಿದೆ. ವಾತಾವರಣ ಕೂಲ್ ಕೂಲ್ ಆಗಿದ್ದು, ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ಒಂದು ದಿನ ರಜೆ ನೀಡಲಾಗಿದೆ. ಬೆಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ.
ಫೆಂಗಲ್ ಸೈಕ್ಲೋನ್ ಎಫೆಕ್ಟ್ನಿಂದಾಗಿ ರಾಜ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದೆ. ಬೆಳಿಗ್ಗೆಯಿಂದ ಜಿಟಿ ಜಿಟಿ ಮಳೆಯಿಂದಾಗಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ. ತುಂತುರು ಮಳೆಗೆ ಸಿಟಿ ಮಂದಿ ಬೇಸತ್ತಿದ್ದಾರೆ.
ಬೆಂಗಳೂರು ನಗರದ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ
ಬೆಂಗಳೂರು ನಗರದಲ್ಲಿ ಎಂದಿನಂತೆಯೇ ಶಾಲಾ ಕಾಲೇಜು ಇರಲಿದೆ. ಈ ಬಗ್ಗೆ ಟಿವಿ9ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಪ್ರತಿಕ್ರಿಯಿಸಿದ್ದು, ಬೆಂಗಳೂರು ನಗರದ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಮಕ್ಕಳನ್ನು ಎಚ್ಚರಿಕೆಯಿಂದ ಶಾಲೆಗೆ ಕಳುಹಿಸುವಂತೆ ಸೂಚನೆ ನೀಡಿದ್ದಾರೆ.
ಇನ್ನು ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಜಡಿ ಮಳೆ ಮತ್ತು ವಿಪರೀತ ಚಳಿ ಹಿನ್ನೆಲೆ ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ. ಇಂದಿನ ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಡಿಸಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ.