ಬೆಂಗಳೂರು: ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಇಬ್ಬರು ಯುವಕರು ಗಾಯಗೊಂಡಿರುವ ಘಟನೆ ನಡೆದಿದೆ.
ಕೇರಳ ಮೂಲದ ಸುನೀಲ್ ಜೋಸೆಫ್, ವಿಷ್ಣು ಜಯರಾಜ್ ಎಂಬವರು ಗಾಯಗೊಂಡಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಫೋಟದ ತೀವ್ರತೆಗೆ ಮನೆ ಗೋಡೆಗಳು, ಕಿಟಕಿ, ಬಾಗಿಲು ಛಿದ್ರವಾಗಿವೆ. ಅಕ್ಕಪಕ್ಕದ ನಾಲ್ಕೈದು ಮನೆಗಳು, ಕೆಲವು ವಾಹನಗಳಿಗೂ ಹಾನಿಯಾಗಿದೆ. ಸ್ಫೋಟಕ್ಕೆ ಕಾರಣ ಏನು ಅನ್ನೋದು ಇನ್ನು ತಿಳಿದು ಬಂದಿಲ್ಲ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಬೆಂಗಳೂರಿನಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ
RELATED ARTICLES