Thursday, December 5, 2024
Homeರಾಷ್ಟ್ರೀಯಆಕ್ಸಿಜನ್‌ ಸಿಲಿಂಡರ್‌ ಸ್ಫೋಟ: ಒಂದೇ ಕುಟುಂಬದ ಆರು ಮಂದಿ ಸಾವು; ಮೂವರು ಗಂಭೀರ

ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ: ಒಂದೇ ಕುಟುಂಬದ ಆರು ಮಂದಿ ಸಾವು; ಮೂವರು ಗಂಭೀರ

ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆ ಭಾಗಶಃ ಕುಸಿದು ಆರು ಜನರು ಸಾವನ್ನಪ್ಪಿರುವ ಮತ್ತು ಮೂವರು ಗಾಯಗೊಂಡಿರುವ ಘಟನೆ ಬುಲಂದ್‌ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ರಿಯಾಜುದ್ದೀನ್ ಎಂಬುವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಇವರ ಮನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 19 ಜನರು ವಾಸಿಸುತ್ತಿದ್ದರು. ರಿಯಾಜುದ್ದೀನ್ ಶಟರ್ ಮಾಡುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು.
ಅಧಿಕಾರಿಗಳ ಪ್ರಕಾರ, ಮೃತರನ್ನು ರಿಯಾಜುದ್ದೀನ್ ಅಲಿಯಾಸ್ ರಾಜು (50), ಅವರ ಪತ್ನಿ ರುಖ್ಸಾನಾ (45), ಸಲ್ಮಾನ್ (16), ತಮನ್ನಾ (24), ಹಿವ್ಜಾ (3) ಮತ್ತು ಆಸ್ ಮೊಹಮ್ಮದ್ (26) ಎಂದು ಗುರುತಿಸಲಾಗಿದೆ.
ಸಿಕಂದರಾಬಾದ್‌ನ ಆಶಾಪುರಿ ಕಾಲೋನಿಯಲ್ಲಿ ರಾತ್ರಿ 8.30 ರಿಂದ 9 ರ ನಡುವೆ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಇಡೀ ಮನೆ ಕುಸಿದು ಬಿದ್ದಿದೆ ಎಂದು ಡಿಎಂ ಸಿಂಗ್ ಹೇಳಿದ್ದಾರೆ. ಎಂಟು ನಿವಾಸಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಇತರರು ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದರು.
ಮೃತರ ಬಗ್ಗೆ ಮಾಹಿತಿ ಲಭಿಸಿದ್ದು, ತಕ್ಷಣವೇ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವ ಕಾಂತ್ ಠಾಕೂರ್ ತಿಳಿಸಿದ್ದಾರೆ.
ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್, ವೈದ್ಯಕೀಯ ಮತ್ತು ಸ್ಥಳೀಯ ಆಡಳಿತದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ.

RELATED ARTICLES
- Advertisment -
Google search engine

Most Popular