Saturday, January 18, 2025
Homeರಾಜ್ಯಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ: 9 ಮಂದಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಂಭೀರ

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ: 9 ಮಂದಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಂಭೀರ

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಲ್ಳಿ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ನಡೆದಿದೆ.
ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿದ್ದಾರೆ. ಬಹುತೇಕ ಎಲ್ಲರ ದೇಹ ಶೇ 50 ರಷ್ಟು ಸುಟ್ಟು ಹೋಗಿದ್ದು, 58 ವರ್ಷದ ಅಜ್ಜಾಸ್ವಾಮಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಭಾನುವಾರ ತಡರಾತ್ರಿ 1.30ರ ವೇಳೆ ಈ ಘಟನೆ ನಡೆದಿದ್ದು, ಗಾಯಗೊಂಡ ಮಾಲಾಧಾರಿಗಳನ್ನು ಕೆಎಂಸಿ-ಆರ್‌ಐಗೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular