ಮೂಡುಬಿದಿರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಆಶ್ರಯದಲ್ಲಿ 37ನೇ ವಾರ್ಷಿಕ ಸಮಾವೇಶ ಕಾರ್ಯಕ್ರಮ ಡಿ. 29ರಂದು ಯುವವಾಹಿನಿ ಮೂಡುಬಿದಿರೆ ಘಟಕದ ಅತಿಥ್ಯದಲ್ಲಿ ಇಲ್ಲಿನ ಸ್ಕೌಟ್‌ಗೈಡ್ಸ್ ಕನ್ನಡ ಭವನದಲ್ಲಿ ಬೆಳಗ್ಗೆ 9.30ರಿಂದ ನಡೆಯಲಿದೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯ 2024-25ನೇ ಸಾಲಿನ ಸಾಂಸ್ಕೃತಿಕ ನಿರ್ದೇಶಕರಾಗಿ ಸುಶಾಂತ್ ಕರ್ಕೇರ ಮಾರೂರು ಆಯ್ಕೆಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರ್ ಪೂಜಾರಿ ಇರುವೈಲು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಗೈದ ಆನಂದ ಬಂಗೇರ ಅವರಿಗೆ ಯುವವಾಹಿನಿ ಗೌರವ ಅಭಿನಂದನೆ ನಡೆಯಲಿದೆ. ಅಲ್ಲದೆ, ಡಾ. ಶಿಲ್ಪಾ ದಿನೇಶ್‌ಗೆ ಯುವವಾಹಿನಿ ಅಭಿನಂದನೆ ಹಾಗೂ ಕುಮಾರಿ ಪ್ರಕೃತಿ ಮಾರೂರು ಅವರಿಗೆ ಯುವವಾಹಿನಿ ಸಾಧಕ ಪುರಸ್ಕಾರ ನಡೆಯಲಿದೆ.
ಅಂದು ಮಧ್ಯಾಹ್ನ 2.30ರಿಂದ ಯುವವಾಹಿನಿ ಮೂಡುಬಿದಿರೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ. ಕಾಯಕ್ರಮವನ್ನು ವಿಜಯ ಬ್ಯಾಂಕ್ ಮೂಡುಬಿದಿರೆಯ ನಿವೃತ್ತ ಅಧಿಕಾರಿ ಪದ್ಮನಾಭ ಸಾಲ್ಯಾನ್ ಉದ್ಘಾಟಿಸಲಿದ್ದು, ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಶಂಕರ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಹರೀಶ್ ಕೆ. ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಡುಬಿದಿರೆಯಲ್ಲಿ ಡಿ. 29ರಂದು ಯುವವಾಹಿನಿ (ರಿ) ಮಂಗಳೂರು ಕೇಂದ್ರ ಸಮಿತಿ 37ನೇ ವಾರ್ಷಿಕ ಸಮಾವೇಶ
RELATED ARTICLES