ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ ಪಾಲ್ ಸುವರ್ಣ

0
104

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಫೆಡರೇಶನ್ ಸದಸ್ಯರ ಮಕ್ಕಳು 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80 2023-24 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.60 ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇತರ ವಿದ್ಯಾರ್ಥಿಗಳು 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.85, 2023-24 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕಗಳಿಸಿರಬೇಕು.

ದಿನಾಂಕ: 15.07.2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್ನಿನ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಈ ಬಗ್ಗೆ ಮಾಹಿತಿಗಾಗಿ 63649 31790 ಸಂಪರ್ಕಿಸಬಹುದು. ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here