ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 IAS ಅಧಿಕಾರಿ ವರ್ಗಾವಣೆ ಮಾಡಿ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದೆ. ಇದೀಗ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆಯ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಇದೀಗ ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ನಿಟ್ಟಿನಲ್ಲಿ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಜುಲೈ 08 ರಂದು ಆದೇಶಿಸಿದೆ.
ಬೆಂಗಳೂರಿನ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಜೆಹೆರಾ ನಸೀಮ್, ಐಎಎಸ್ (ಕೆಎನ್: 2013) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ, ಕಲಬುರಗಿ ಉಪ ಆಯುಕ್ತರಾಗಿ ಶ್ರೀ ಕೃಷ್ಣ ಬಾಜಪೇಯಿ, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಮಂಗಳೂರು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ, ಐಎಎಸ್ (ಕೆಎನ್: 2016) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ವಿಜಯಪುರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿ ಇದ್ದಂತ ಭೂಬಾಲನ್ ಟಿ, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.