ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಇದರ ವತಿಯಿಂದ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರಧಾನ ಸಮಾರಂಭವು ಮಂಗಳೂರಿನ ಲೇಡಿಹಿಲ್‌ನಲ್ಲಿರುವ ಪತ್ರಿಕಾ ಭವನದಲ್ಲಿ ಜೂ. 25ರಂದು ಬೆಳಿಗ್ಗೆ 11 ಗಂಟೆಯಿಂದ ಜರಗಲಿದೆ.
ಮಂಗಳೂರಿನ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಐಪಿಎಸ್ ಅವರು ಹಿರಿಯ ಪತ್ರಕರ್ತ ವಿಜಯ ಕೋಟ್ಯಾನ್ ಪಡು ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಖಾದರ್ ಷಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನ ಅಧ್ಯಕ್ಷರಾದ ಪಿಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾದ ರಾಮಕೃಷ್ಣ ಆರ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.