ದ.ಕ.ಜಿ ಪಂ.ಹಿ. ಪ್ರಾ ಶಾಲೆ ಕೆಲಿಂಜ ಶಾಲಾ ಪ್ರಾರಂಭೋತ್ಸವ

0
114

ದ.ಕ.ಜಿ ಪಂ.ಹಿ. ಪ್ರಾ ಶಾಲೆ ಕೆಲಿಂಜ ಇಲ್ಲಿ ಶಾಲಾ ಪ್ರಾರಂಭೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು ವಿಶೇಷ ದಾಖಲಾತಿ ಆಂದೋಲನ ನಿಮಿತ್ತ ದಾಖಲಾತಿ ಆಂದೋಲನದ ಘೋಷಣೆಗಳನ್ನು ಹೇಳುತ್ತಾ ಶಾಲೆಯ ವಿದ್ಯಾರ್ಥಿಗಳು , ಶಿಕ್ಷಕರು , ಶಾಲಾ ಪೋಷಕರು, ಶಾಲಾ ಮೇಲುಸ್ತುವಾರಿ ಸಮಿತಿಯವರು ಹಾಗೂ ಹಳೆ ವಿದ್ಯಾರ್ಥಿ ಸಂಘದವರು ಶಾಲಾ ಪರಿಸರದಲ್ಲಿ ಮೆರವಣಿಗೆಯನ್ನು ನಡೆಸಿದರು.ಮಕ್ಕಳಿಗೆ ಬಲೂನುಗಳನ್ನು ನೀಡಿ, ಹೂ ಮಳೆ ಸುರಿಸಿ ಪಣ್ಣೀರು ಎರಚಿ, ಸಿಹಿ ತಿಂಡಿ ವಿತರಿಸುವುದರೊಂದಿಗೆ ಆದರದಿಂದ ಸ್ವಾಗತಿಸಲಾಯಿತು.

ನಂತರ ಸಭಾ ಕಾರ್ಯಕ್ರಮ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮೋಹಿತ್ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಶಾಲಾ ಹಳೆ ವಿದ್ಯಾರ್ಥಿ ಸಂಘದವರು ವತಿಯಿಂದ ಈ ವರ್ಷ ದಾಖಲಾದ ವಿದ್ಯಾರ್ಥಿಗಳಿಗೆ ವಾಟರ್ ಬಾಟಲ್ ಗಳನ್ನು ನೀಡಿ ಪ್ರೋತ್ಸಾಹಿಸಿದರು. ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಉಚಿತವಾಗಿ ನೀಡಲಾದ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು.10ನೇ ತರಗತಿಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ,ವಿಟ್ಲ ಹೈಸ್ಕೂಲ್ನಲ್ಲಿ ಪ್ರಥಮ ಸ್ಥಾನ ಗಳಿಸಿದ, ಶಾಲಾ ಹಿರಿಯ ವಿದ್ಯಾರ್ಥಿನಿ ಕುಮಾರಿ ನಿಧಿ ಯನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಉಪಧ್ಯಕ್ಷ ಜನಾರ್ಧನ ಪೂಜಾರಿ, ಸದಸ್ಯರಾದ ಸಂದೀಪ್ ಪೂಜಾರಿ,ಅಕ್ಷರ ದಾಸೋಹ ನಿರ್ದೇಶಕರಾದ ನೋಣಯ್ಯ ನಾಯ್ಕ್ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಪೆಲತಡ್ಕ ,ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಜಯಂತಿ, ದೇವಪ್ಪ ಗೌಡ ಪಾಲ್ತಿಮಾರ್ ಉಪಸ್ಥಿತರಿದ್ದರು.

ಮಕ್ಕಳ ಪೋಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು, ಹಳೆ ವಿದ್ಯಾರ್ಥಿಗಳು, ಸಂಘ-ಸಂಸ್ಥೆಯ ಸದಸ್ಯರುಗಳು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶಿಕ್ಷಕಿ ನಳಿನಾಕ್ಷಿ ಸ್ವಾಗತಿಸಿ, ಪ್ರಭಾರ ಮುಖ್ಯ ಶಿಕ್ಷಕಿ ಉಷಾ ಸುವರ್ಣ ಪ್ರಾಸ್ತಾವಿಕ ಮಾಡಿ,ಗೌರವ ಶಿಕ್ಷಕಿ ಜಯಶ್ರೀ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ಪಡೆಯುವ ಮಕ್ಕಳ ಪಟ್ಟಿಯನ್ನು ವಾಚಿಸಿ. ಶಿಕ್ಷಕಿ ಅಶ್ವಿತಾ ವಂದಿಸಿದರು.

LEAVE A REPLY

Please enter your comment!
Please enter your name here