ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಹಿಂದೂ ಮುಖಂಡ ಶರಣ್ ಪಂಪ್ವೆಲ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಅವರ ಬಂಧನಕ್ಕೆ ತಡೆಯಾಜ್ಞೆ ನೀಡಿದೆ ಮತ್ತು ಪೊಲೀಸ್ ತನಿಖೆಗೆ ಸಹಕರಿಸುವಂತೆ ಸೂಚಿಸಿದೆ. ಇದೇ ರೀತಿ, ವಿಹೆಚ್ಪಿ ಕಾರ್ಯಕರ್ತ ನವೀನ್ ನೆರಿಯ ವಿರುದ್ಧದ ಎಫ್ಐಆರ್ಗೆ ಕೂಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
. ಹಿಂದೂ ಮುಖಂಡ ಶರಣ್ ಪಂಪ್ವೆಲ್ ಅವರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. “ವಿನಾಕಾರಣ ದ್ವೇಷ ಭಾಷಣದ ಆರೋಪ ಹೊರಿಸಲಾಗಿದೆ” ಎಂದು ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ, “ಶರಣ್ ಪಂಪ್ವೆಲ್ ಬಂಧನ ಸೇರಿದಂತೆ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಹಾಗೆ, ಪೊಲೀಸರ ವಿಚಾರಣೆಗೆ ಸಹಕರಿಸುವಂತೆ ಶರಣ್ ಪಂಪ್ವೆಲ್ ಅವರಿಗೆ ಸೂಚನೆ ನೀಡಿದೆ.