ದಾವಣಗೆರೆ-ಡಿಸೆಂಬರ್,
ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 29 ರಂದು ಭಾನುವಾರ ಬೆಳಿಗ್ಗೆ 10-00 ಗಂಟೆಗೆ ನಗರದ ಪಿ.ಜೆ. ಬಡಾವಣೆಯ ಪೊಲೀಸ್ ಸಮುದಾಯ ಭವನದಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ಉಚಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್ ತಿಳಿಸಿದ್ದಾರೆ. ಸಮಾರಂಭದ ಅಧ್ಯಕ್ಷತೆ ಹಾಗೂ ಉದ್ಘಾಟನೆಯನ್ನು ದಾವಣಗೆರೆಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಾವಣಗೆರೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ. ಸಂತೋಷ್, ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಮಂಜುನಾಥ್ ಜಿ, ಪೊಲೀಸ್ ಉಪಾಧೀಕ್ಷಕರಾದ ಪೊಲೀಸ್ ಮಲ್ಲೇಶ್ ದೊಡ್ಡನಿ, ಪೊಲೀಸ್ ಉಪಾಧೀಕ್ಷಕರಾದ ಪ್ರಕಾಶ ಪಿ.ಬಿ., ಪೊಲೀಸ್ ನಿರೀಕ್ಷಕರಾದ ಸೋಮೇಶ್ವರ ಎಚ್.ಬಿ. ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ.
ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ಮಕ್ಕಳಿಗೆ ಪರೀಜ್ಞಾನ ಮೂಡಿಸಲು ಪರೀಕ್ಷೆ ಭಯ ದೂರ ಮಾಡಲು ಪರೀಕ್ಷೆ ಎದುರಿಸುವ ಧೈರ್ಯ ತುಂಬುವ ಉಚಿತ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಶೈಕ್ಷಣಿಕ ಕಾಳಜಿಯ ಪೋಷಷಕರು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಉಚಿತ ಕಾರ್ಯಾಗಾರ ಯಶಸ್ವಿ ಗೊಳಿಸಬೇಕಾಗಿ ಸಂಸ್ಥೆಯ ಪ್ರಧಾನ ಕಾರ್ಯ ದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.