ನಂದಳಿಕೆ: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಬೆಳ್ಳಿಹಬ್ಬ ಸಂಭ್ರಮದ ಪೋಸ್ಟರ್ ಬಿಡುಗಡೆ ಸಮಾರಂಭವು ಡಿಸೆಂಬರ್ 21ರಂದು ಶನಿವಾರ ಮಧ್ಯಾಹ್ನ ಗಂಟೆ 01-30ಕ್ಕೆ ಸರಿಯಾಗಿ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೇದಮೂರ್ತಿ ಶ್ರೀ ಬಿ.ಕೆ. ವಿಘ್ನೇಶ್ ಭಟ್ ಅವರು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಬೆಳ್ಳಿಹಬ್ಬ ಸಂಭ್ರಮದ ಪೋಸ್ಟರ್ ಅನಾವರಣಗೊಳಿಸಲಿದ್ದಾರೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಡಿ. 1ರಂದು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಬೆಳ್ಳಿಹಬ್ಬ ಸಂಭ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ
RELATED ARTICLES