ವರದಿ ÷ಮಂದಾರ ರಾಜೇಶ್ ಭಟ್ ತುಳುನಾಡು ವಾರ್ತೆ
ಶಿವಮೊಗ್ಗ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿಂದುಳಿದ ವರ್ಗಗಳ ನಾಯಕ ದಿ ಎಸ್ ಬಂಗಾರಪ್ಪನವರ ಹುಟ್ಟುಹಬ್ಬವನ್ನು ಕಾಂಗ್ರೆಸ್ ಕಾರ್ಯಕರ್ತರು ರಕ್ತದಾನ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು
ಶಿವಮೊಗ್ಗದ ರೆಡ್ ಕ್ರಾಸ್ ಸಂಜೀವಿನಿ ರಕ್ತ ನಿಧಿ ಕೇಂದ್ರದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ರಕ್ತದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು
ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಆರ್ ಎಂ ಮಂಜುನಾಥಗೌಡ ಇವರು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಲೋಕಸಭಾ ಸದಸ್ಯರಾದ ಆಯನೂರು ಮಂಜುನಾಥ್, ಶಿಮುಲ್ ಅಧ್ಯಕ್ಷರಾದ ವಿದ್ಯಾಧರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಮರಿಯಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ರೀಕಾಂತ್, ಕಾಂಗ್ರೆಸ್ ಮುಖಂಡರುಗಳಾದ ರಮೇಶ್ ಇಕ್ಕೇರಿ, ವೈ ಎಚ್ ನಾಗರಾಜ್, ಶೇಷಾದ್ರಿ, ಹಾರೋಬೇನವಳ್ಳಿ ಹಾಲಪ್ಪ, ಆರ್ ಮೋಹನ್ ದಿನೇಶ್, ಗಿರೀಶ್, ಯುವ ಮುಖಂಡರುಗಳಾದ ಶರತ್ ಮರಿಯಪ್ಪ, ವಿನಯ್ ತಾಂಡ್ಲೆ, ಕುರುವಳ್ಳಿ ನಾಗರಾಜ್, ಮುರುಗೇಶ್, ಟಿ.ಡಿ. ಶಶಿಕುಮಾರ್, ಕಾರ್ತಿಕ್ ರವಿಕುಮಾರ್, ಲೋಕೇಶ್ ಮತ್ತಿತರರು ಇದ್ದರು.
ಈ ರಕ್ತದಾನ ಶಿಬಿರದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಕೂಡ ಭಾಗವಹಿಸಿದ್ದರು. ಎಂದು ರಮೇಶ ಶಂಕರಘಟ್ಟ ಪತ್ರಿಕೆಗೆ ಮಾಹಿತಿ ತಿಳಿಸಿದ್ದಾರೆ.

