ಬಂಗಾಡಿ ರವಿರಾಜ ಬಳ್ಳಾಲ್ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

0
33

ಧರ್ಮಸ್ಥಳ : ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗಾಢ ಸಂತಾಪ ವ್ಯಕ್ತಪಡಿಸಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.

ರವಿರಾಜ ಬಳ್ಳಾಲ್ ಅವರು ಧರ್ಮಾನುರಾಗಿಯಾಗಿದ್ದು, ಬಂಗಾಡಿ ಬಸದಿಯನ್ನು ಅತಿಶಯ ಕ್ಷೇತ್ರವಾಗಿ ಅಭಿವೃದ್ಧಿಪಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದರು. ಸದಾ ಸ್ವಾಧ್ಯಾಯದಲ್ಲಿ ನಿರತರಾಗಿದ್ದ ಅವರು ಧರ್ಮ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಸಾಧನೆ ಕುರಿತಾಗಿ ನಿರಂತರ ಚಿಂತನ–ಮಂಥನ ನಡೆಸುತ್ತಿದ್ದರು.

ಬಂಗಾಡಿ ಪ್ರದೇಶದಲ್ಲಿ ಅನೇಕ ಧರ್ಮಪ್ರಭಾವನಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡಿದ್ದ ಅವರು, ಕೃಷಿ ಹಾಗೂ ತೋಟಗಾರಿಕೆಯಲ್ಲಿಯೂ ವಿಶೇಷ ಆಸಕ್ತಿ ಮತ್ತು ಅನುಭವ ಹೊಂದಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮ ಭಕ್ತರೂ, ಅಭಿಮಾನಿಯೂ ಆಗಿದ್ದ ರವಿರಾಜ ಬಳ್ಳಾಲ್ ಅವರು ಕ್ಷೇತ್ರದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸದಾ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆಯ ಕುರಿತು ಅವರು ಅಮೂಲ್ಯ ಕೃತಿಯೊಂದನ್ನು ರಚಿಸಿದ್ದು, ಅದು ಅವರ ಬೌದ್ಧಿಕ ಮತ್ತು ಸಾಂಸ್ಕೃತಿಕ ಕೊಡುಗೆಯಾಗಿ ಸದಾ ನೆನಪಿನಲ್ಲಿ ಉಳಿಯಲಿದೆ ಎಂದು ಡಾ. ವೀರೇಂದ್ರ ಹೆಗ್ಗಡೆ ಅವರು ತಮ್ಮ ಸಂತಾಪ ಸಂದೇಶದಲ್ಲಿ ಸ್ಮರಿಸಿದ್ದಾರೆ.

LEAVE A REPLY

Please enter your comment!
Please enter your name here