ಎಂ.ಜಿ. ಶೆಟ್ಟಿ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

0
50

ಭಾರತೀಯ ಜೀವವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ ಎಂ.ಜಿ. ಶೆಟ್ಟಿ ಅವರ ನಿಧನದ ಸುದ್ದಿ ತಿಳಿದು ವಿಷಾದವಾಯಿತು.ಗ್ರಾಮೀಣ ಪ್ರದೇಶಗಳಲ್ಲಿ ಕೂಡಾ ವಿಮಾ ಏಜೆಂಟರುಗಳ ಮೂಲಕ ಅವರು ಜೀವವಿಮೆಯ ಮಹತ್ವದ ಬಗ್ಗೆ ಮಾಹಿತಿ, ಮಾರ್ಗದರ್ಶನ ನೀಡಿ ವಿಮೆ ಮಾಡುವಂತೆ ಪ್ರೇರಣೆ ನೀಡುತ್ತಿದ್ದರು.
ಧರ್ಮಸ್ಥಳದ ಎಲ್ಲಾ ಸಿಬ್ಬಂದಿಗಳಿಗೆ ವಿಮೆ ಮಾಡಿಸುವಲ್ಲಿ ಅವರು ವಿಶೇಷ ಸಹಕಾರ ನೀಡಿರುತ್ತಾರೆ.
ನಮ್ಮ ಕ್ಷೇತ್ರದ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ಎಲ್ಲಾ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.
ಧರ್ಮಸ್ಥಳದಲ್ಲಿ ಪ್ರತಿವರ್ಷ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸುವ ರಾಜ್ಯಮಟ್ಟದ ವಸ್ತುಪ್ರದರ್ಶನ ಸಮಿತಿಯ ಸದಸ್ಯರಾಗಿಯೂ ಅವರು ಉತ್ತಮ ಸೇವೆ ನೀಡಿದ್ದಾರೆ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಅವರ ಅಗಲುವಿಕೆಯಿಂದ ಕುಟುಂಬ-ವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ.

(ಡಿ. ವೀರೇಂದ್ರ ಹೆಗ್ಗಡೆಯವರು)

LEAVE A REPLY

Please enter your comment!
Please enter your name here