ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಸುರೇಶ್ ಪರವ ಅವರಿಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರಿಂದ ಗೌರವ

0
3

ಬೆಳ್ತಂಗಡಿ: ದೈವಾರಾಧನಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಸುರೇಶ್ ಪರವ ಅವರನ್ನು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಗೌರವಪೂರ್ವಕವಾಗಿ ಅಭಿನಂದಿಸಿದರು.

ಸುರೇಶ್ ಪರವ ಅವರು ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವ ಸಲ್ಲಿಸಲಾಯಿತು. ದೈವಾರಾಧನಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಲ್ಲಿಸುತ್ತಿರುವ ಸೇವೆ, ಧಾರ್ಮಿಕ ಪರಂಪರೆಯ ಉಳಿವು ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ನೀಡಿರುವ ಕೊಡುಗೆಯನ್ನು ಸ್ಮರಿಸಿ ಕೃತಜ್ಞತೆ ವ್ಯಕ್ತಪಡಿಸಲಾಯಿತು.

ದೈವಾರಾಧನೆಯಂತಹ ಪಾರಂಪರಿಕ ಕಲಾ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವ ಸಾಧಕರನ್ನು ಗುರುತಿಸಿ ಗೌರವಿಸುವುದು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಗೌರವವನ್ನು ಹೆಚ್ಚಿಸುತ್ತದೆ ಎಂಬ ಅಭಿಪ್ರಾಯ ಈ ಸಂದರ್ಭದಲ್ಲಿ ವ್ಯಕ್ತವಾಯಿತು.