ಮಂಗಳೂರು : ವಾಮಂಜೂರು ಬಳಿಯ ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿಗೊಳಗಾದ ಪ್ರದೇಶಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆತ್ತಿಕಲ್ ಗುಡ್ಡದ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಿರ್ಮಿಸುತ್ತಿರುವ ವೆಟ್ ವೆಲ್‌ಗೆ ಭೇಟಿ ನೀಡಿದ ಬಳಿಕ ರಾ.ಹೆ ಬಳಿಯಿರುವ ಕೆತ್ತಿಕಲ್ ಗುಡ್ಡ ಕುಸಿತ ಸಂಭವಿಸಿದ ಪ್ರದೇಶಕ್ಕೆ ಭೇಟಿ ನೀಡಿ ಜಾಗದ ಪರೀಶೀಲನೆ ನಡೆಸಿದ ಸಂಸದರು ಅಲ್ಲಿನ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದರು.
ಮುಂಬರುವ ದಿನಗಳಲ್ಲಿ ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಸಂಭಂದಪಟ್ಟ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಸದರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಂತೋಷ್, ತಹಶಿಲ್ದಾರರಾದ ಪ್ರಶಾಂತ್, ಮ.ನ.ಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮ.ನ.ಪಾ ಎಂಜಿನಿಯರ್‌ಗಳು, ಸ್ಥಳೀಯ ಕಾರ್ಪೋರೆಟರ್, ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಧ್ಯಕ್ಷರಾದ ರಾಜೇಶ್ ಕೊಟ್ಟಾರಿ, ಬಿಜೆಪಿ ಮುಖಂಡರಾದ ಜಗದೀಶ್ ಶೇಣವ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.