ದಕ್ಷಿಣ ಕನ್ನಡ, ಉಡುಪಿ ಸೇರಿ ಕರಾವಳಿಯಲ್ಲಿ ಮಳೆ ಸಾಧ್ಯತೆ

0
69

ಮಂಗಳೂರು : ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಅಕ್ಟೋಬರ್ 6ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಒಣಹವೆ ಇರುವ ಸಾಧ್ಯತೆಯಿದೆ.

ಅಕ್ಟೋಬರ್ 7ರಂದು ಕರಾವಳಿಯಲ್ಲಿ ಮಳೆ

ಅಕ್ಟೋಬರ್ 7ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯದಲ್ಲಿ ನೈಋತ್ಯ ಮುಂಗಾರು ಕರಾವಳಿ ಕರ್ನಾಟಕದಲ್ಲಿ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ.

ದಕ್ಷಿಣ ಕನ್ನಡದಲ್ಲಿ ಉತ್ತಮ ಮಳೆ

ಸೋಮವಾರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಕ್ತಿನಗರದಲ್ಲಿ 11 ಸೆಂ.ಮೀ. ಮಳೆ ದಾಖಲಾಗಿದೆ. ಬೆಳ್ತಂಗಡಿಯಲ್ಲಿ 8 ಸೆಂ.ಮೀ., ಮಂಗಳೂರು ವಿಮಾನ ನಿಲ್ದಾಣದಲ್ಲಿ 7 ಸೆಂ.ಮೀ. ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಎಚ್‌ಎಂಎಸ್‌ನಲ್ಲಿ 7 ಸೆಂ.ಮೀ. ಮಳೆಯಾಗಿದೆ.

ಮುಂದಿನ ಎರಡು ದಿನಗಳಲ್ಲೂ ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.