ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೊಲೆ ಆರೋಪಿ ನಟ ದರ್ಶನ್ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಕುಳಿತುಕೊಂಡು ಸಿಗರೇಟು ಸೇದುತ್ತಿರುವ ಫೋಟೊ ಬಹಿರಂಗವಾಗಿದ್ದು, ಭಾರೀ ಚರ್ಚೆಗಳನ್ನು ಹುಟ್ಟು ಹಾಕಿದೆ. ಈ ನಡುವೆ ದರ್ಶನ್ ಫೋಟೊ ಹೇಗೆ ಲೀಕ್ ಆಯಿತು ಎಂದು ಪೊಲೀಸರು ತಲೆ ಕೆಡಿಸಿಕೊಳ್ಳುತ್ತಿರುವಾಗಲೇ, ಈ ಕುರಿತ ಮಾಹಿತಿಯೊಂದು ಹೊರಬಿದ್ದಿದೆ.
ದರ್ಶನ್, ನಾಗ, ಕುಳ್ಳ ಸೀನ ಹಾಗೂ ದರ್ಶನ್ ಮ್ಯಾನೇಜರ್ ನಾಗರಾಜ್ ಕುಳಿತಿದ್ದ ಫೋಟೊವನ್ನು ರೌಡಿ ವೇಲು ಎಂಬಾತ ತೆಗೆದಿದ್ದ ಎನ್ನಲಾಗಿದೆ. ಆತ ಅದನ್ನು ಪತ್ನಿಗೆ ಕಳುಹಿಸಿದ್ದ. ಆಕೆ ತಮ್ಮ ಸ್ನೇಹಿತರಿಗೆ ಕಳುಹಿಸಿದ್ದರು. ಅದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಹೀಗೆ ಫೋಟೊ ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.