Monday, January 20, 2025
Homeರಾಜಕೀಯಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತದಾನ

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತದಾನ

ಉಜಿರೆ: ಧರ್ಮಸ್ಥಳದಲ್ಲಿ ಶುಕ್ರವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಪತ್ನಿ ಹೇಮಾವತಿ ವೀ. ಹೆಗ್ಗಡೆ 164ನೇ ಯಕ್ಷಗಾನ ಮತಗಟ್ಟೆ ಎಸ್.ಡಿ.ಎಂ.  ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೆ ಪ್ರಭುಗಳಾಗಿದ್ದು ಅರ್ಹ ಹಾಗೂ ದಕ್ಷ ನಾಯಕರನ್ನು ಆಯ್ಕೆ ಮಾಡುವುದು ಪ್ರಜೆಗಳ ಹಕ್ಕು ಮತ್ತು ಕರ್ತವ್ಯವೂ ಆಗಿದೆ. ಮತದಾನದ ಮೂಲಕ ಆದರ್ಶ ನಾಯಕರು ಆಯ್ಕೆಯಾಗಲಿ ಎಂದು ಹೆಗ್ಗಡೆಯವರು ಹಾರೈಸಿದರು. ಹೆಗ್ಗಡೆಯವರ ಸಹೋದರ ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಕೂಡಾ ಅದೇ ಮತಗಟ್ಟೆಯಲ್ಲಿ ಮತದಾನ ಮಾಡಿದರು.

RELATED ARTICLES
- Advertisment -
Google search engine

Most Popular