ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕಾಸರಗೋಡು ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ದಿನಾಂಕ 10 ನವೆಂಬರ್ 2024 ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆದ ಒಂದು ದಿನದ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ- 2024 ಇದರ ಅಂಗವಾಗಿ ಕನ್ನಡ ಗ್ರಾಮದ ಪರಿಸರ ವೇದಿಕೆ ಮತ್ತು ಮನೆಯಂಗಳದಲ್ಲಿ ಕಾಸರಗೋಡು ಜಿಲ್ಲೆಯ ಶಾಲಾ ಮಕ್ಕಳಿಗಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ಸುಮಾರು 100 ಕ್ಕೂ ಅಧಿಕ ಮಕ್ಕಳು ವಿದ್ಯಾರ್ಥಿಗಳು ಸ್ಪರ್ಧಾಳುಗಳಾಗಿ ಭಾಗವಹಿಸಿದ್ದರು. ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 15 ದಶಂಬರ್ 2024 ಆದಿತ್ಯವಾರದಂದು ಅಪರಾಹ್ನ ಗಂಟೆ 3.00 ರಿಂದ 5.00 ರ ತನಕ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ, ಸ್ಥಾನ ಪಡೆದ ವಿದ್ಯಾರ್ಥಿಗಳು ಹಾಗೂ ಹೆತ್ತವರು,ಪೋಷಕರು, ಅಧ್ಯಾಪಕರು ಸ್ಪರ್ಧಾ ತೀರ್ಪುಗಾರರ ಸಮ್ಮುಖದಲ್ಲಿ ಸಮ್ಮೇಳನದ ಸ್ಪರ್ಧೆಯ ವಿಜೇತರಾದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸ್ಪರ್ಧಾ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಸ್ಮರಣೆಕೆಗಳನ್ನು ನೀಡಿ ಗೌರವಿಸಲಾಗುವುದು. ಈ ಸಂದರ್ಭದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಗ್ರೂಪ್ ಫೋಟೋ ತೆಗೆದು ಅದನ್ನು ಸ್ಮರಣ ಸಂಚಿಕೆಯಲ್ಲಿ ಮುದ್ರಿಸಲಾಗುವುದು. ಮುಖ್ಯ ಅತಿಥಿಗಳಾಗಿ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರು, ಸಹ ಅಧ್ಯಕ್ಷರು, ರಾಜ್ಯಮಟ್ಟದ ವಿದ್ಯಾರ್ಥಿ ಕವಿಗೋಷ್ಠಿಯ ಅಧ್ಯಕ್ಷರು, ರಾಜ್ಯಮಟ್ಟದ ಸಣ್ಣ ಕಥಾ ಗೋಷ್ಠಿಯ ಅಧ್ಯಕ್ಷರು, ಕವಿಗಳು, ಕಥಾ ಪ್ರಸ್ತುತಿ ಮಾಡಿದವರನ್ನು ಆಮಂತ್ರಿಸಲಾಗುವುದು.
ಸಮ್ಮೇಳನಕ್ಕೆ ಕಾಸರಗೋಡು ಜಿಲ್ಲೆಯ ಸುಮಾರು 50ಕ್ಕಿಂತಲೂ ಅಧಿಕ ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕರು, ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು, ಆಡಳಿತ ವರ್ಗದವರು ಸಕ್ರಿಯವಾಗಿ ಭಾಗವಹಿಸಿದ್ದ ಕ್ಕಾಗಿ ಕೃತಜ್ಞತೆ ಗಳನ್ನು ಸಲ್ಲಿಸಲಾಗುವುದು. ಕಾಸರಗೋಡು ಜಿಲ್ಲೆಯ ಶಾಲಾ ಕಾಲೇಜಿನಲ್ಲಿ ಗಡಿನಾಡ ಕನ್ನಡ ಮಕ್ಕಳ ಸಾಹಿತ್ಯ ಉತ್ಸವ ಮತ್ತು ಕನ್ನಡ ಸಂಸ್ಕೃತಿ ಮೇಳ ಸರಣಿ ಅಭಿಯಾನವನ್ನು ಆರಂಭಿಸುವ ಕಾರ್ಯಯೋಜನೆಯಿದೆ. ಈ ಕುರಿತು ಸಮಾಲೋಚನೆ ನಡೆಸಲಾಗುವುದು. ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕವನ ಸ್ಪರ್ಧೆ ಮತ್ತು ರಾಜ್ಯಮಟ್ಟದ ಸಣ್ಣ ಕಥಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸಮ್ಮೇಳನದಂದು ಸ್ಪರ್ಧಾ ವಿಜೇತರಿಗೆ ಪ್ರಮಾಣ ಪತ್ರ ಮತ್ತು ಸ್ಮರಣೆಕೆ ನೀಡಲಾಗಿತ್ತು. ಸ್ಪರ್ಧಾ ವಿಜೇತರಾದ ಕೆಲವು ವಿದ್ಯಾರ್ಥಿಗಳು ಪ್ರಮಾಣ ಪತ್ರ, ಸ್ಮರಣಿಕೆ ಪಡೆಯದವರು ಕನ್ನಡ ಗ್ರಾಮದಲ್ಲಿ ದಿನಾಂಕ 15 ದಶಂಬರ್ 2024 ರಂದು ನಡೆಯುವ ಸಮ್ಮೇಳನದ ಸ್ಪರ್ಧಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುರಸ್ಕಾರವನ್ನು ಪಡೆಯಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ತಪ್ಪದೇ ಪಾಲ್ಗೊಂಡು ಸಹಕರಿಸಬೇಕಾಗಿ ವಿನಂತಿಸುತ್ತೇವೆ. ವಿವಿಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ,ತೃತೀಯ ಸ್ಥಾನ ಪಡೆದ ಸ್ಪರ್ಧಾ ವಿಜೇತರು ತಮ್ಮ ಪೂರ್ಣ ಹೆಸರು, ಶಾಲೆಯ ವಿಳಾಸ, ಸಂಪರ್ಕ ಮೊಬೈಲ್ ಸಂಖ್ಯೆಯನ್ನು ಟೈಪ್ ಮಾಡಿ ಶಿವರಾಮ ಕಾಸರಗೋಡು, ಅಧ್ಯಕ್ಷರು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕನ್ನಡ ಗ್ರಾಮ, ಕಾಸರಗೋಡು -671121 ವಾಟ್ಸಾಪ್ ಮೊಬೈಲ್ ಸಂಖ್ಯೆ: 9448572016 ಇವರಿಗೆ ಕಳುಹಿಸಲು ಕೋರಲಾಗಿದೆ. ಶಿವರಾಮ ಕಾಸರಗೋಡು ಅಧ್ಯಕ್ಷರು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕನ್ನಡ ಗ್ರಾಮ, ಕಾಸರಗೋಡು-671121 5 :-9448572016