ಡಿ.7: ಗೀತೋತ್ಸವ ಸಮಾರೋಪಕ್ಕೆ ಪವನ್ ಕಲ್ಯಾಣ್

0
1

ಉಡುಪಿ: ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಪುತ್ತಿಗೆ ಮಠ ಆಶ್ರಯದಲ್ಲಿ ಕೃಷ್ಣಮಠ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭ ಡಿ.7ರಂದು ನಡೆಯಲಿದೆ.
ಅಂದು ಅಪರಾಹ್ನ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅಭ್ಯಾಗತರಾಗಿ ಆಂಧ್ರಪ್ರದೇಶ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಪರಿಸರ, ಅರಣ್ಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಪವನ್ ಕಲ್ಯಾಣ್ ಆಗಮಿಸುವರು ಎಂದು ಪರ್ಯಾಯ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.
ನ.8ರಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಂದ ಉದ್ಘಾಟನಗೊಂಡ ಬೃಹತ್ ಗೀತೋತ್ಸವ ಒಂದು ತಿಂಗಳ ಪರ್ಯಂತ ವಿವಿಧ ಕಾರ್ಯಕ್ರ‌ಮಗಳೊಂದಿಗೆ ನಡೆದಿದ್ದು, ವಿಶ್ವ ದಾಖಲೆಗೆ ಪಾತ್ರವಾದ ಲಕ್ಷಕಂಠ ಗೀತಾ ಪಾರಾಯಣ ‌ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿರುವುದನ್ನು ಸ್ಮರಿಸಬಹುದು ಎಂದು ಮಠದ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here