Monday, January 20, 2025
HomeUncategorizedಡಿ.8:ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ

ಡಿ.8:ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ

ದಿನಾಂಕ: 08-12-2024ನೇ ಭಾನುವಾರದಂದು ಅಪರಾಹ್ನ 12.00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆಯನ್ನು ಆಚರಿಸಲಾಗುವುದು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ|| ಜಿ. ಸಂತೋಷ್ ಕುಮಾರ್, ಏ.ಂ.S. ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮತ್ತು ಶ್ರೀ ರಾಜೇಂದ್ರ ಡಿ.ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರು ಆಗಮಿಸಲಿದ್ದಾರೆ. ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ, ಎಲ್ಲಾ ಗೃಹರಕ್ಷಕ/ಗೃಹರಕ್ಷಕಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

RELATED ARTICLES
- Advertisment -
Google search engine

Most Popular