ಮೂಡುಬಿದಿರೆ: ಇಲ್ಲಿನ ಪುರಸಭಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ 6ನೇ ವಾರ್ಡಿನ ಕಡೆಪಳ್ಳ, ಗಾಂಧಿನಗರದಲ್ಲಿ ರೂ.20.68 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಉದ್ಯಾನವನವನ್ನು ಮಂಗಳವಾರ ಲೋಕಾರ್ಪಣೆಗೊಳಿಸಲಾಯಿತು.
ಶಾಸಕ ಉಮಾನಾಥ ಎ.ಕೋಟ್ಯಾನ್ ಉದ್ಯಾನವನವನ್ನು ಉದ್ಘಾಟಿಸಿ, ಊರಿನ ಎಲ್ಲ ವಯೋಮಾನದವರಿಗೆ ಅನುಕೂಲವಾಗುವಂತೆ ಉದ್ಯಾನವನ ನಿರ್ಮಿಸಲಾಗಿದೆ. ಇದನ್ನು ಸದುಪಯೋಗಪಡಿಸಿ ಉತ್ತಮ ರೀತಿಯಲ್ಲಿ ನೋಡಿಕೊಳ್ಳುವುದು ಸ್ಥಳೀಯರ ಕರ್ತವ್ಯ. ಈ ಉದ್ಯಾನವನದ ಮತ್ತಷ್ಟು ಅಭಿವೃದ್ಧಿಗೆ ಬೇಡಿಕೆಗಳು ಬಂದಿದ್ದು, ಅನುದಾನ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದರು.
ಪುರಸಭೆ ಅಧ್ಯಕ್ಷೆ ಜಯಶ್ರೀ ಕೇಶವ, ಉಪಾಧ್ಯಕ್ಷ ನಾಗರಾಜ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಸ್ವಾತಿ ಪ್ರಭು, ವಾರ್ಡ್ ಸದಸ್ಯೆ ದಿವ್ಯಾ ಜಗದೀಶ್, ಪುರಸಭೆ ಸದಸ್ಯರು, ಮುಖ್ಯಾಧಿಕಾರಿ ಇಂದು.ಎA., ಇಂಜಿನಿಯರ್ ನಳಿನ್ ಕುಮಾರ್ ಎಚ್, ಗಾಂಧಿನಗರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಸದಾನಂದ ಅಮೀನ್, ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ಸಂಚಾಲಕ ಹರೀಶ್ ಎಂ.ಕೆ, ಅಂಗನವಾಡಿ ಕಾರ್ಯಕರ್ತೆ ಜಯಂತಿ, ಸ್ಥಳೀಯರು ಉಪಸ್ಥಿತರಿದ್ದರು.