ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ವಿರುದ್ಧ ಮಾನಹಾನಿಕರ, ಅಪಪ್ರಚಾರ ಮಾಡಿದ 8 ಪ್ರಕರಣಗಳಿಗೆ ಸಂಬಂಧಿಸಿ ದೂರು ನೀಡಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಜಿಲ್ಲಾ ಕಾಂಗ್ರೆಸ್ ನ ಕಾನೂನು, ಮಾನವ ಹಕ್ಕುಗಳು ಮತ್ತು ಆರ್ ಟಿಐ ವಿಭಾಗದ ಅಧ್ಯಕ್ಷ ಮನೋರಾಜ್ ರಾಜೀವ್ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಪದ್ಮರಾಜ್ ವಿರುದ್ಧ ಅಪಪ್ರಚಾರ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.