Thursday, April 24, 2025
Homeರಾಷ್ಟ್ರೀಯದೆಹಲಿ: 9ನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಮಾಡಿದ ಸ್ನೇಹಿತರು

ದೆಹಲಿ: 9ನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಮಾಡಿದ ಸ್ನೇಹಿತರು

ನವದೆಹಲಿ: ಸ್ನೇಹಿತರೇ ತನ್ನ ಸ್ನೇಹಿತನನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ನವದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ ನಡೆದಿದೆ. ಸ್ನೇಹಿತರೆಂದರೆ ಪ್ರಾಣಕ್ಕೆ ಪ್ರಾಣ ಕೊಡುವವರು ಎಂದು ಹೇಳುತ್ತಾರೆ, ಆದರೆ ಪ್ರಾಣ ತೆಗೆದ ಇಂಥವರು ಎಂಥಾ ಸ್ನೇಹಿತರು. 9ನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಿ ಫೋನ್ ಮೂಲಕ ಕುಟುಂಬದವರ ಬಳಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಆದರೆ ಪ್ರಕರಣ ಭಾರಿ ತಿರುವು ಪಡೆದುಕೊಂಡಿದೆ. ಬಾಲಕನನ್ನು ಭಲ್ಸ್ವಾ ಸರೋವರದ ಬಳಿಯ ನಿರ್ಜನ ಸ್ಥಳಕ್ಕೆ ಕರೆದೊಯ್ದು, ಅಲ್ಲಿ ಹಲವು ಬಾರಿ ಇರಿದು, ಶವವನ್ನು ಎಸೆದು ಹೋಗಿದ್ದಾರೆ.

ಮೃತನ ದೇಹದಲ್ಲಿ ಹಲವಾರು ಇರಿತದ ಗಾಯಗಳಿದ್ದು, ಇದು ಹಿಂಸಾತ್ಮಕ ದಾಳಿಯನ್ನು ಸೂಚಿಸುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ನಂತರ ದೆಹಲಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಅಪರಾಧದ ಹಿಂದಿನ ಉದ್ದೇಶ ಮತ್ತು ಹೆಚ್ಚಿನ ಜನರು ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular