ಶಿವಮೊಗ್ಗಕ್ಕೆ ಸಂಚಾರಿ ಪೀಠಕ್ಕೆ ಆಗ್ರಹ : ಬೃಹತ್ ಜಾಥಾಗೆ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಭರ್ಜರಿ ಬೆಂಬಲ!

0
12

​ಶಿವಮೊಗ್ಗ : ಶಿವಮೊಗ್ಗದಲ್ಲಿ ಹೈಕೋರ್ಟ್‌ನ ಸಂಚಾರಿ ಪೀಠವನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನಾ ಜಾಥಾಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಇದೀಗ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗವೂ ಸಹ ಹೋರಾಟಕ್ಕೆ ಅಧಿಕೃತವಾಗಿ ಧುಮುಕಿದೆ.
​ಈ ಬೃಹತ್ ಪಾದಯಾತ್ರೆಯಲ್ಲಿ ವಿಭಾಗದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

“ಶಿವಮೊಗ್ಗಕ್ಕೆ ಸಂಚಾರಿ ಪೀಠದ ಅಗತ್ಯತೆ ಇಂದಿನ ಅನಿವಾರ್ಯತೆಯಾಗಿದೆ. ಈ ನ್ಯಾಯಸಮ್ಮತ ಹೋರಾಟಕ್ಕೆ ನಮ್ಮ ವಿಭಾಗವು ಭುಜಕ್ಕೆ ಭುಜ ಕೊಟ್ಟು ನಿಲ್ಲಲಿದೆ.”
— ಎಂ. ರಮೇಶ್ ಶಂಕರಘಟ್ಟ, ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ, ಶಿವಮೊಗ್ಗ.

​ಮಲೆನಾಡು ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಸಂಚಾರಿ ಪೀಠ ಸ್ಥಾಪನೆಯಾಗಲೇಬೇಕು ಎನ್ನುವುದು ಇಂದಿನ ಜಾಥಾದ ಮುಖ್ಯ ಉದ್ದೇಶವಾಗಿದೆ. ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ. ರಮೇಶ್ ಶಂಕರಘಟ್ಟ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಮೂಲಕ ಹೋರಾಟಕ್ಕೆ ಮತ್ತಷ್ಟು ಆನೆಬಲ ತಂದಿದ್ದಾರೆ.

LEAVE A REPLY

Please enter your comment!
Please enter your name here