ಬೇಡಿಕೆ ಈಡೇರಿಕೆಗೆ ಆಗ್ರಹ

0
7

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದೇಶೀಯ ಭಾಷಾ ಹಿತರಕ್ಷಣಾ ವೇದಿಕೆ ವತಿಯಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ರವರನ್ನು ಮತ್ತು ಮಾನ್ಯ ವಿಧಾನ ಪರಿಷತ್ ಸಭಾಪತಿಗಳಾದ ಸಲೀಂ ಅಹಮದ್
ಕರ್ನಾಟಕದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಲ್ಲಾ ಭಾಷಾ ಶಿಕ್ಷಕರ ನೇಮಕಾತಿಗೆ ಸಮಾನ ಅವಕಾಶ ಕಲ್ಪಿಸಬೇಕು ಹಾಗೂ ಕೃತಕ ಬುದ್ಧಿಮತ್ತೆ (ಎಐ) ವಿಷಯವನ್ನು ತೃತೀಯ ಭಾಷೆಗೆ ಪರ್ಯಾಯವಾಗಿ ಅಳವಡಿಸದೆ, ಪ್ರತ್ಯೇಕ ವಿಷಯವಾಗಿ ಬೋಧಿಸಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಸಭಾಪತಿಗಳ ಗಮನಕ್ಕೆ ತರಲಾಯಿತು. ಇದರೊಂದಿಗೆ ಪ್ರತಿಭಟನಾನಿರತ ಶಿಕ್ಷಕರು ಮುಂದಿಟ್ಟಿರುವ ಇತರೆ ವಿಷಯಗಳ ಬಗ್ಗೆಯೂ ವಿವರವಾಗಿ ಮನವರಿಕೆ ಮಾಡಿಕೊಡಲಾಯಿತು.

ಶಿಕ್ಷಕರ ಅಹವಾಲುಗಳು ಮತ್ತು ಬೇಡಿಕೆಗಳನ್ನು ಸಹಾನುಭೂತಿಯಿಂದ ಆಲಿಸಿದ ಸಭಾಪತಿಗಳು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಈ ಹಿಂದೆ ಜಾರಿಯಲ್ಲಿದ್ದ ವ್ಯವಸ್ಥೆಯ ಮಾದರಿಯಲ್ಲಿಯೇ ಸೂಕ್ತ ಆದೇಶ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಭಾಪತಿಗಳಾದ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ,ಸುಶೀಲ್ ನಮೋಶಿ,ಮಧು ಜಿ. ಮಾದೇಗೌಡ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

ವರದಿ ರಾಯಿ ರಾಜ ಕುಮಾರ್