ಉಡುಪಿ: ಬೀಡಿ ಕಾರ್ಮಿಕರ ಸರ್ಕಾರ ನಿಗದಿ ಮಾಡಿದ ತುಟ್ಟಿಭತ್ಯೆ, ಕನಿಷ್ಠ ಕೂಲಿಯನ್ನು ನೀಡಲು ಮಾಲೀಕರು ಹಿಂದೆಟು ಹಾಕುತ್ತಿದ್ದಾರೆ. ಸರ್ಕಾರದ ನಿಗದಿ ಮಾಡಿದ 301 ರೂ. ಬದಲು 287 ರೂ. ನೀಡುವುದಾಗಿ ಆಶ್ವಾಸನೆ ನೀಡಿದ್ದರೂ ಅದನ್ನು ಪಾಲಿಸುತ್ತಿಲ್ಲ. ಹೀಗಾಗಿ ಕಾರ್ಮಿಕರು ನಿರ್ಣಾಯಕ ಹೋರಾಟಕ್ಕೆ ಮುಂದಾಗಬೇಕು ಎಂದು ಬೀಡಿ ಫೆಡರೇಶನ್ ರಾಜ್ಯ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ಹೇಳಿದರು.
ಭಾನುವಾರ ವಿಮಾ ನೌಕರರ ಸಂಘದ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ 8ನೇ ಸಮ್ಮೇಳನ ಉದ್ಘಾಟಿಸಿ ಮಾತಾನಾಡಿದರು.
ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ 3 ಲಕ್ಷಕ್ಕೂ ಮಿಕ್ಕಿ ಬೀಡಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ನವೆಂಬರ್ 24ರಿಂದ ಅರ್ನಿದಿಷ್ಟಾವಧಿ ಅಹೋರಾತ್ರಿ ಹೋರಾಟ ಹಾಗೂ 28 ರಂದು ಸಹಾಯಕ ಕಮೀಷನರ್ ಕಚೇರಿಗೆ ಮುತ್ತಿಗೆ ಹಾಕಲು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಬೀಡಿ ಫೆಡರೇಶನ್ ಉಪಾಧ್ಯೆ ಬಲ್ಕೀಸ್, ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಅಧ್ಯೆ ಸುನೀತಾ ಶೆಟ್ಟಿ, ಜನವಾದಿ ಮಹಿಳಾ ಸಂಘದ ಕಾರ್ಯದರ್ಶಿ ಶೀಲಾವತಿ, ಉಡುಪಿ ಬೀಡಿ ಸಂಘದ ಅಧ್ಯೆ ನಳಿನಿ ಎಸ್. ಉಪಸ್ಥಿತರಿದ್ದರು. ಸಮ್ಮೇಳನದ ಅಧ್ಯಕ್ಷತೆಯನ್ನು ಬೀಡಿ ಫೆಡರೇಶನ್ ಅಧ್ಯಕ್ಷ ಮಹಾಬಲ ವಡೇಯರಹೊಬಳಿ ವಹಿಸಿದ್ದರು. ಫೆಡರೇಶನ್ ಕಾರ್ಯದರ್ಶಿ ಉಮೇಶ್ ಕುಂದರ್ ಸ್ವಾಗತಿಸಿ, ಕವಿರಾಜ್ ಎಸ್.ಕಾಂಚನ್ ಕಾರ್ಯಕ್ರಮ ನಿರೂಪಿಸಿದರು.

