ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿದ ಅನಿತಾ ಕಾಸರಗೋಡು ಬಂಧನಕ್ಕೆ ಒತ್ತಾಯ!

0
83

ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ಅನಿತಾ ಕಾಸರಗೋಡು ವಿರುದ್ಧ ಕಠಿಣಕ್ರಮ ಕೈಗೊಳ್ಳುವಂತೆ ಎಲ್ಲಾ ಬಿಲ್ಲವ ಬಾಂಧವರ ಕೋರಿಕೆಯಾಗಿದೆ .

ಅನಿತಾ ಕಾಸರಗೋಡು ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಪ್ರಕಟಗೊಂಡಿರುವ ವಿಡಿಯೋದಲ್ಲಿ ಬಿಲ್ಲವ ಸಮಾಜದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಲಾಗಿದ್ದು ಧರ್ಮ ಮತ್ತು ಜಾತಿಗಳ ನಡುವೆ ದ್ವೇಷ ಹಾಗೂ ವೈಮನಸುಗಳನ್ನು ಉಂಟು ಮಾಡುವ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ.

ಇಂತಹ ಪೋಸ್ಟ್ ಮತ್ತು ವಿಡಿಯೋಗಳು ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಪೊಲೀಸ್ ಇಲಾಖೆ ಆಕೆಯನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು ಇಲ್ಲವಾದಲ್ಲಿ ಎಲ್ಲಾ ಬಿಲ್ಲವ ಸಂಘ ಸಂಸ್ಥೆಗಳು ಸೇರಿ ಹೋರಾಟ ಮಾಡಲಾಗುವುದು ಎಂದು ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘ (ರಿ) ಬೆಂಗಳೂರು ಇದರ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀಧರ್ ಅಮೀನ್ ಮಣಿಪುರ ಹೇಳಿಕೆ ನೀಡಿದ್ದಾರೆ .

LEAVE A REPLY

Please enter your comment!
Please enter your name here